ಉಚತ ಬೈಸಿಕಲ್ ವಿತರಣಾ ಯೋಜನೆ:

ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶಗಳ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಠಿಯಿಂದ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮವನ್ನು 2006-07ನೇ ಸಾಲಿನಿಂದ ಪ್ರಾರಂಭಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 8ನೇ ತರಗತಿಯ ಬಡತನ ರೇಖೆಗಿಂತ ಕೆಳಗೆ ಇರುವ ಹೆಣ್ಣು ಮಕ್ಕಳಿಗೆ ಈ ಸೌಲಭ್ಯ ಒದಗಿಸಲಾಗಿತ್ತು.

ಬಸ್ ಪಾಸ್ ಹೊಂದಿದ ಹಾಗೂ ಹಾಸ್ಟೆಲ್ ಸೌಲಭ್ಯ ಪಡೆದ ಹೆಣ್ಣು ಮಕ್ಕಳಿಗೆ ಈ ಸೌಲಭ್ಯ ನೀಡಿರುವುದಿಲ್ಲ. 2007-08ನೇ ಸಾಲಿನಿಂದ ಈ ಯೋಜನೆಯನ್ನು ನಗರ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಹೆಣ್ಣು ಮಕ್ಕಳಿಗೂ ಹಾಗೂ ಗಂಡು ಮಕ್ಕಳಿಗೂ ವಿಸ್ತರಿಸಲಾಯಿತು.

  • ಹೆಣ್ಣು ಮಕ್ಕಳ ದಾಖಲಾತಿಯನ್ನು ಉತ್ತೇಜಿಸುವುದು.
  • ಮಕ್ಕಳು ದೂರದಲ್ಲಿರುವ ಶಾಲೆಯನ್ನು ತಲುಪಲು ಅನುಕೂಲ ಮಾಡುವುದು.
  • ಮಕ್ಕಳ ಕಲಿಕೆ ಹಾಗೂ ಉಳಿಯುವಿಕೆಯನ್ನು ಉತ್ತಮ ಪಡಿಸುವುದು.
  • ಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು.
  • ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದು.
  • ಪ್ರಯಾಣದ ವೇಳೆಯನ್ನು ತಗ್ಗಿಸುವುದು.