ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ :

ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನದ ಜವಾಬ್ದಾರಿಯು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯದ್ದಾಗಿರುತ್ತದೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೇಡ್-1 ಹುದ್ದೆಯ ಅಧಿಕಾರಿಯ ಸಹಕಾರದೊಂದಿಗೆ, ಈ ಕಾರ್ಯಕ್ರಮವು ನಡೆಯುತ್ತದೆ.

ತಾಲ್ಲೂಕು ಮಟ್ಟದಲ್ಲಿ ಗ್ರೂಪ್-ಬಿ ಹುದ್ದೆಯ ಅಧಿಕಾರಿಯ ಸಹಕಾರದೊಂದಿಗೆ, ತಾಲ್ಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯು ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿರುತ್ತದೆ

ಆರೋಗ್ಯ ಇಲಾಖೆ :

ಮಧ್ಯಾಹ್ನ ಬಿಸಿಯೂಟದ ಜೊತೆಗೆ ಹೆಚ್ಚುವರಿ ಪೌಷ್ಟಿಕಾಂಶವುಳ್ಳ ಮಾತ್ರೆಗಳನ್ನು ಸಹ ನೀಡಲಾಗುತ್ತಿದೆ. ಇದನ್ನು Karnataka Drugs Logistics and Warehousing Society; ಯ ಸಹಯೋಗದೊಂದಿಗೆ ಸರಬರಾಜು ಮಾಡಲಾಗುತ್ತಿದೆ. ಮಾತ್ರೆಗಳನ್ನು ಶಿಕ್ಷಣ ಇಲಾಖೆಯಿಂದ ಬಂದ ಬೇಡಿಕೆಗೆ ಅನುಸಾರವಾಗಿ ತಾಲ್ಲೂಕು ಮಟ್ಟದಲ್ಲಿ ಪೂರೈಕೆ ಮಾಡಿದ ನಂತರ ಶಾಲೆಗಳಿಗೆ ಮರುಹಂಚಿಕೆಯಾಗುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯಾಜ್ಯಗಳ ಇಲಾಖೆ :

ಈ ಇಲಾಖೆಯು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲು ಎ.ಪಿ.ಎಲ್. ಆಹಾರ ಧಾನ್ಯಗಳನ್ನು ಪೂರೈಸುವ ಕೆಲಸ ಮಾಡುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ :

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮವು ಬಿಸಿಯೂಟ ಕಾರ್ಯಕ್ರಮಕ್ಕೆ ಬೇಳೆ, ಎಣ್ಣೆ, ಉಪ್ಪು ಇನ್ನಿತರ ಆಹಾರಧಾನ್ಯಗಳನ್ನು ಪೂರೈಸುವ ಜವಾಬ್ದಾರಿ ಹೊಂದಿದ್ದು, ಆಹಾರಧಾನ್ಯಗಳ ಬೇಡಿಕೆಗನುಸಾರ ಯಾವುದೇ ಅಡೆತಡೆಗಳಿಲ್ಲದೆ ಯೋಜನೆಗಳನ್ನು ಕಾರ್ಯಗತಗೊಳಿಸುವುದು ಇದರ ಜವಾಬ್ದಾರಿಯಾಗಿದೆ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಹಾರಧಾನ್ಯಗಳ ಬೇಡಿಕೆಗೆ ಅನುಸಾರವಾಗಿ 02 ತಿಂಗಳ ಮುಂಗಡ ಹಣ ಬಿಡುಗಡೆ ಮಾಡಿ ಮುಂದಿನ ತಿಂಗಳುಗಳಲ್ಲಿ ಸರಬರಾಜು ಮಾಡುವ ಆಹಾರಧಾನ್ಯಗಳ ಬಿಲ್ಲಿಗೆ ಈ ಹಣವನ್ನು ಸರಿದೂಗಿಸುತ್ತದೆ.

ಭಾರತೀಯ ಆಹಾರ ನಿಗಮ :

ಭಾರತೀಯ ಆಹಾರ ನಿಗಮವು 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ಅಕ್ಕಿ, ಗೋಧಿಯನ್ನು ಎಫ್.ಸಿ.ಐ. ಗೋದಾಮಿನಲ್ಲಿ ಶೇಖರಿಸಿಟ್ಟುಕೊಂಡು, ಹಂಚಿಕೆ ಮಾಡುವ ಕಾರ್ಯ ನಿಗಮದ್ದಾಗಿರುತ್ತದೆ.
ಆಹಾರ ಸರಬರಾಜಿನಲ್ಲಿ ಯಾವುದೇ ನಿಲುಗಡೆಗೆ ಆಸ್ಪದವಿಲ್ಲದಂತೆ ತ್ರೈಮಾಸಿಕಕ್ಕೆ ಅಗತ್ಯವಿರುವ ಆಹಾರಧಾನ್ಯಗಳನ್ನು ಸರಬರಾಜು ಮಾಡುವ ಕಾರ್ಯವನ್ನು ನಿರ್ವಹಿಸುತ್ತದೆ. ಎಫ್.ಎ.ಕ್ಯೂ. ಆಧಾರದ ಮೇಲೆ ಮಧ್ಯಾಹ್ನ ಉಪಹಾರ ಯೋಜನೆಗೆ ಎಫ್.ಸಿ.ಐ.ಯು ಅತ್ಯುತ್ತಮ ಆಹಾರಧಾನ್ಯಗಳನ್ನು ಸರಬರಾಜು ಮಾಡುತ್ತದೆ.

ಶಿಕ್ಷಣ ಇಲಾಖೆ, ಭಾರತೀಯ ಆಹಾರ ನಿಗಮದ ಅಧಿಕಾರಿಗಳನ್ನೊಳಗೊಂಡಂತೆ ಜಿಲ್ಲಾಧಿಕಾರಿಗಳ ನೇತೃತ್ವದ ಆಹಾರ ಗುಣಮಟ್ಟ ಪರಿಶೀಲನಾ ತಂಡ ಆಹಾರಧಾನ್ಯ ಸರಬರಾಜಿನ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರವಿದೆಯೇ ಎಂದು ಪರಿಶೀಲಿಸಿ ವರದಿ ನೀಡುತ್ತದೆ ಹಾಗೂ ಆಹಾರಧಾನ್ಯಗಳ ಮಾದರಿಯನ್ನಿಟ್ಟುಕೊಂಡು ಪರಿಶೀಲಿಸುತ್ತದೆ.