ಸೂಚಿತ ಆಹಾರ ಪಟ್ಟಿ :
ವಿದ್ಯಾರ್ಥಿಗಳಿಗೆ ವಾರದಲ್ಲಿ ಈ ಕೆಳಕಂಡಂತೆ ಆಹಾರವನ್ನು ತಯಾರಿಸಿ ನೀಡಲು ಸೂಚಿಸಲಾಗಿದೆ.
ವಾರ/ದಿನ |
ನಿಗದಿ ಪಡಿಸಿರುವ ಆಹಾರದ ವಿವರ |
ಸಾಂಬಾರಿಗೆ ಬಳಸಬೇಕಾದ ತರಕಾರಿ |
ಷರಾ |
ಸೋಮವಾರ |
ಅನ್ನ-ಸಾಂಬಾರ್ |
ಪಾಲಕ್, ನುಗ್ಗೆ ಸೊಪ್ಪು ಅಥವಾ ಇತರೆ ಸೊಪ್ಪು,ಆಲೂಗೆಡ್ಡೆ, ಬದನೆಕಾಯಿ, ಈರುಳ್ಳಿ, ಟೊಮೆಟೋ ಇತರೆ ತರಕಾರಿಗಳು |
ಬೇಳೆ/ಕಾಳನ್ನು ಕಡ್ಡಾಯಗೊಳಿಸಿದೆ. |
ಮಂಗಳವಾರ |
ಅನ್ನ-ಸಾಂಬಾರ್ |
ಬೂದುಕುಂಬಳ,ಕ್ಯಾರೆಟ್,ಬೀನ್ಸ್,ಎಲೆಕೋಸು, ಬೀಟ್ರೂಟ್,ಆಲೂಗೆಡ್ಡೆ, ಈರುಳ್ಳಿ, ಟೊಮೆಟೋ ಇತರೆ ತರಕಾರಿಗಳು |
|
ಬುಧವಾರ |
ಅನ್ನ-ಸಾಂಬಾರ್ |
ನುಗ್ಗೆಕಾಯಿ, ಬೀನ್ಸ್ಆಲೂಗೆಡ್ಡೆ, ಈರುಳ್ಳಿ, ಟೊಮೆಟೋ ಇತರೆ ತರಕಾರಿಗಳು |
|
ಗುರುವಾರ |
ಅನ್ನ-ಸಾಂಬಾರ್ |
ಕುಂಬಳಕಾಯಿ,ಸೋರೆಕಾಯಿ, ಸಾಂಬಾರುಸೌತೆ,ಬೆಂಡೆಕಾಯಿ,ಹೀರೆಕಾಯಿ,ಮೂಲಂಗಿ,ಇತರೆ ತರಕಾರಿಗಳು |
|
ಶುಕ್ರವಾರ/ |
ಬಿಸಿಬೇಳೆ ಬಾತ್ |
ಬೀನ್ಸ್,ಗೆಡ್ಡೆಕೋಸು,ಕ್ಯಾರೆಟ್, ಕ್ಯಾಪ್ಸಿಕಮ್,ಈರುಳ್ಳಿ ಟೊಮೆಟೋ ಇತರೆ ತರಕಾರಿಗಳು ಮತ್ತು ದ್ವಿದಳ ಧಾನ್ಯಗಳು |
|
ಶನಿವಾರ |
ಗೋಧಿ ಉತ್ಪನ್ನಗಳಿಂದ ತಯಾರಿಸಿದ ಆಹಾರ |
ಈರುಳ್ಳಿ, ಬೀನ್ಸ್, ಕ್ಯಾರೆಟ್, ಎಲೆಕೋಸು ಸಬ್ಬಸ್ಸಿಗೆ ಸೊಪ್ಪು ಮತ್ತು ಇತರೆ ದ್ವಿದಳ ಧಾನ್ಯಗಳು |
ಪೌಷ್ಠಿಕಾಂಶದ ವಿವರ:
ಮಧ್ಯಾಹ್ನ ಬಿಸಿಯೂಟ ನೀಡುವುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 450 (ಅಂದಾಜು) ಕ್ಯಾಲೋರಿ ಹಾಗೂ 12 ಗ್ರಾಂ ಪ್ರೋಟೀನನ್ನು, ಉನ್ನತ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 700 (ಅಂದಾಜು) ಕ್ಯಾಲೋರಿ ಮತ್ತು 20 ಗ್ರಾಂ. ಪೋಟೀನನ್ನು ಒಳಗೊಂಡಂತೆ ಪೌಷ್ಠಿಕಾಂಶ ದೊರೆಯುತ್ತಿದೆ.