ಮಧ್ಯಾಹ್ನಉಪಹಾರ ಯೋಜನೆಯು ನಡೆದು ಬಂದ ದಾರಿ :
2002-03ರವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಒಂದು ತಿಂಗಳಿಗೆ ತಲಾ 3 ಕೆ.ಜಿ. ಅಕ್ಕಿಯನ್ನು ಪ್ರತೀ ತಿಂಗಳು ನೀಡಲಾಗಿತ್ತಿದೆ. ಕರ್ನಾಟಕ ರಾಜ್ಯದ ಮಧ್ಯಾಹ್ನದ ಉಪಹಾರ ಯೋಜನೆ ಕಾರ್ಯಕ್ರಮ 2002-03ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಈಶಾನ್ಯ ವಲಯದ ಏಳು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳ 1 ರಿಂದ 5 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ಪ್ರಾರಂಭಿಸಲಾಯಿತು.
- 2003-04 ನೇ ಸಾಲಿನಿಂದ ಉಳಿದ 20 ಜಿಲ್ಲೆಗಳಿಗೂ ವಿಸ್ತರಿಸಲಾಯಿತು.
- ದಿನಾಂಕ 01-09-2004 ರಿಂದ ಅನುದಾನಿತ ಪ್ರಾಥಮಿಕ ಶಾಲೆಗಳಿಗೆ ವಿಸ್ತರಿಸಲಾಯಿತು.
- ದಿನಾಂಕ 01-10-2004 ರಿಂದ ರಾಜ್ಯದ ಸರ್ಕಾರಿ ಮತ್ತು ಅನುದಾನಿತ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ.
- 2007-08ನೇ ಸಾಲಿನಿಂದ ಯೋಜನೆಯನ್ನು ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಿಗೂ ವಿಸ್ತರಿಸಲಾಯಿತು. ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳೆಲ್ಲರಿಗೂ ಮಧ್ಯಾಹ್ನ ಉಪಹಾರವನ್ನು ಒದಗಿಸಲಾಯಿತು. 1 ರಿಂದ 8ನೇ ತರಗತಿಯವರೆಗೆ ಕೇಂದ್ರ ಸರ್ಕಾರದಿಂದ ಹಾಗೂ 9 ಮತ್ತು 10 ನೇ ತರಗತಿಗಳಿಗೆ ರಾಜ್ಯ ಸರ್ಕಾರದ ನೆರವಿನಿಂದ ಮಧ್ಯಾಹ್ನ ಬಿಸಿಯೂಟವನ್ನು ಒದಗಿಸಲಾಯಿತು.
- ದಿನಾಂಕ:01-08-2013ರಿಂಧ 1-10ನೇ ತರಗತಿಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನ ಪ್ರತೀ ವಿದ್ಯಾರ್ಥಿಗೂ 18 ಗ್ರಾಂ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ 150 ಎಂ.ಎಲ್. ಹಾಲನ್ನು ನೀಡಲಾಗುತ್ತಿದೆ.
ಉದ್ದೇಶಗಳು :
- ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸುವುದು.
- ಶೈಕ್ಷಣಿಕ ವರ್ಷದಲ್ಲಿ ಮಧ್ಯೆ ಮಧ್ಯೆ ಶಾಲೆಯನ್ನು ತೊರೆಯದಂತೆ ತಡೆಯುವುದು.
- ಪೌಷ್ಠಿಕಾಂಶ ಹೆಚ್ಚಿಸುವುದರ ಮೂಲಕ ಶಾಲಾ ಮಕ್ಕಳ ಆರೋಗ್ಯವನ್ನು ಅಭಿವೃದ್ಧಿಗೊಳಿಸುವುದು.
- ಶಾಲಾ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದು.
- ಸಾಮಾಜಿಕ ಸಮಾನತೆಯನ್ನು ಅಭಿವೃದ್ಧಿ ಪಡಿಸಿ ತನ್ಮೂಲಕ ರಾಷ್ಟ್ರೀಯ ಭಾವೈಕ್ಯತೆಯನ್ನು ಮಕ್ಕಳಲ್ಲಿ ಮೂಡಿಸುವುದು.
- ಬರಪೀಡಿತ ಪ್ರದೇಶಗಳಿಗೆ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ನೀಡಲಾಗುತ್ತಿದೆ.