ಪೀಠಿಕೆ
ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು[ಪ್ರೌಢಶಿಕ್ಷಣ] ವಿಭಾಗದಡಿಯಲ್ಲಿ ದೈಹಿಕ ಶಿಕ್ಷಣ ಶಾಖೆಯ ಕಾರ್ಯ ನಿರ್ವಹಿಸುತ್ತಿದೆ. ಈ ಶಾಖೆಯಲ್ಲಿ ಕೆಳಕಂಡ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ:
- >
- ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಲಾ ಹಂತ, ಕ್ಲಸ್ಟರ್ ಹಂತ, ಬ್ಲಾಕ್ ಹಂತ, ಜಿಲ್ಲಾ ಹಂತ, ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟದ ಕ್ರೀಡಾಸ್ಪರ್ದೆಯನ್ನು ಸಂಘಟಿಸುವುದು.
- ರಾಜ್ಯ ಮಟ್ಟದಲ್ಲಿ ವಿಜೇತರಾದ ಮಕ್ಕಳಿಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯು ನಡೆಸುವ ರಾಷ್ಟ್ರಮಟ್ಟದ ಕ್ರೀಡಾಸ್ಪರ್ದೆಗಳಿಗೆ ಕಳುಹಿಸಲಾಗುವುದು.
- ರಾಷ್ಟ್ರಮಟ್ಟದ ಕ್ರೀಡಾಸ್ಪರ್ದೆಗಳ ಸಂಘಟನೆಗೆ ಅನುದಾನ ಬಿಡುಗಡೆ ಮಾಡುವುದು ಮತ್ತು ತರಬೇತಿ ಶಿಬಿರಗಳನ್ನು ನಡೆಸುವುದು.
- ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ಕ್ರೀಡೆಗಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಉಡುಪು ಮತ್ತು ಕ್ರೀಡಾಸಾಮಗ್ರಿ ವಿತರಣೆ ಬಗ್ಗೆ ಪ್ರಕ್ರಿಯೆಗಳನ್ನು ನಡೆಸುವುದು.
- ರಾಷ್ಟ್ರೀಯ ಹಬ್ಬಗಳ ದಿನಾಚರಣೆಯಲ್ಲಿ ಇಲಾಖಾವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದು. ಈ ಸಂಬಂಧ ಮಕ್ಕಳಿಗೆ ತರಬೇತಿಗೊಳಿಸುವುದು.
- ಭಾರತ್ ಸೇವಾ ದಳ, ಭಾರತ್ ಸ್ಕೌಟ್ಸ್ ಮತ್ತು ಗ್ಯಡ್ಸ್ ಸಂಸ್ಥೆ ಹಾಗೂ ಭಾರತ್ ಸೇವಕ ಸಮಾಜ್ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುವುದು.
- ವಿದ್ಯಾರ್ಥಿ ಕ್ರೀಡಾ ನಿಧಿ ಸಂಗ್ರಹಣೆ ಮತ್ತು ನಿರ್ವಹಣೆ.
- ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ಕ್ರೀಡಾಚಟುವಟಿಕೆಗಳನ್ನು ಸಂಘಟಿಸುವುದು.