ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವು 1963 ರಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯನ್ನು ಮತ್ತು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯನ್ನು ಸ್ಥಾಪಿಸಿದೆ. ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗಾಗಿ ಅನೇಕ ಪ್ರಯೋಜನಾಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದರ ಮೂಲಕ ರಾಷ್ಟ್ರದಲ್ಲೇ ಇದೊಂದು ಮಾದರಿಯ ಉಪಕ್ರಮವಾಗಿದೆ.