ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ

2015-16ನೇ ಸಾಲಿನಿಂದ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ (ಈ ಹಿಂದೆ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗುತ್ತಿತ್ತು). ಇದರಲ್ಲಿ ವರ್ಷಪೂರ್ತಿ ತಪಾಸಣಾ ಕಾರ್ಯಕ್ರಮವು 1ರಿಂದ 10ನೇ ತರಗತಿಯ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಮುಂದುವರೆಸಲಾಗುತ್ತದೆ. ಎನ್.ಆರ್.ಎಚ್.ಎಮ್ ನಡಿ ಪ್ರತಿ ತಾಲ್ಲೂಕಿನಲ್ಲಿ ಒಬ್ಬರು ವೈದ್ಯಾಧಿಕಾರಿ ಹಾಗೂ ಒಬ್ಬ ನರ್ಸ್ ಒಳಗೊಂಡಂತೆ 2 ತಂಡಗಳನ್ನು ರಚಿಸಿಕೊಂಡು ಮಕ್ಕಳ ತಪಾಸಣೆ ನಡೆಸಲಾಗಿದೆ.

2016-17ನೇ ಸಾಲಿನಲ್ಲಿ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.